×
Ad

ರಾಜ್ಯದಲ್ಲಿ ನ.1ರ ವರೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ

Update: 2025-10-26 21:14 IST

ಬೆಂಗಳೂರು, ಅ.26: ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಪ್ರಬಲಗೊಂಡು ತಮಿಳುನಾಡು, ಆಂದ್ರ ಕರಾವಳಿಯ ಸಮೀಪ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ನ.1ರವರೆಗೆ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮುಂಜಾನೆಯಿಂದಲೇ ತುಂತುರು ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. ಈ ಮಳೆಯು ನ.1ನೆ ತಾರೀಕಿನ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ಮಳೆಯ ವಾತಾವರಣವು ಅ.29ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಉಳಿದ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇನ್ನು ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ನ.1ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News