ಆ.27ರಿಂದ ರಾಜ್ಯದಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಉಡುಪಿ, ದ.ಕ, ಉ.ಕ ಸಹಿತ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Update: 2025-08-26 20:36 IST
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಆ.26: ರಾಜ್ಯಾದ್ಯಂತ ಆ.27ರಿಂದ ಮಳೆ ಹೆಚ್ಚಾಗಲಿದ್ದು, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.