×
Ad

ರಾಜ್ಯದಲ್ಲಿ ಮೇ 21ರ ವರೆಗೆ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Update: 2026-05-18 23:11 IST

ಸಾಂದರ್ಭಿಕ ಚಿತ್ರ | PC : Gemini AI

ಬೆಂಗಳೂರು : ಕರಾವಳಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಮೇ 21ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಸೋಮವಾರ ಇಲಾಖೆಯು ಪ್ರಕಟನೆ ಹೊರಡಿಸಿದ್ದು, ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ನೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಮೈಸೂರಿನಲ್ಲಿಯೂ ಮಳೆಯ ಮುನ್ಸೂಚನೆ ಇದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯೊಂದಿಗೆ ಗುಡುಗು-ಮಿಂಚಿನ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಮಧ್ಯಾಹ್ನದ ಬಳಿಕ ಮೋಡಗಟ್ಟುವಿಕೆ ಹಾಗೂ ಸಂಜೆ ವೇಳೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News