×
Ad

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಅಧಿಕಾರಿಗಳ ಜೊತೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸೂಚನೆ

Update: 2023-07-06 11:39 IST

ಬೆಂಗಳೂರು, ಜು 6: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News