ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅಧಿಕಾರ ಸ್ವೀಕಾರ
Update: 2023-11-30 20:51 IST
ಬೆಂಗಳೂರು: ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಯಾಗಿದ್ದ ವಂದಿತಾ ಶರ್ಮಾ ನ.30 ಸೇವೆಯಿಂದ ನಿವೃತ್ತರಾಗಿದ್ದು, ಅವರಿಂದ ತೆರವಾಗುತ್ತಿರುವ ಹುದ್ದೆಯನ್ನು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಡಾ.ರಜನೀಶ್ ಗೋಯಲ್ ವಹಿಸಿಕೊಳ್ಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉಮಾಶಂಕರ್ ಅವರು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಪ್ರಭಾರಿಯಾಗಿಯೂ ಮುಂದುವರೆಯಲಿದ್ದಾರೆ.