×
Ad

ರಾಜ್ಯಸಭಾ ಚುನಾವಣೆ: ಅಡ್ಡಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

Update: 2024-02-27 11:51 IST

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ' ಎಂದರು.

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, 'ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಿರಲಿಲ್ಲ' ಎಂದು ಆರೋಪಿಸಿದರು.

'ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ' ಎಂದು ಈ ಹಿಂದೆ ಶಾಸಕ ಎಸ್.ಟಿ.ಸೋಮಶೇಖರ್ ಅವರು  ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News