×
Ad

ರಾಮ ಮಂದಿರ ಉದ್ಘಾಟನೆ ಸಮಾರಂಭ: ಯುಪಿ ಸಚಿವರಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

Update: 2024-01-05 20:35 IST

ಬೆಂಗಳೂರು: ಇದೇ ತಿಂಗಳಿನಲ್ಲಿ ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಎಲ್ಲ ಸಚಿವರನ್ನು ಉತ್ತರ ಪ್ರದೇಶ ಕೃಷಿ ಸಚಿವ ಸೂರ್ಯಪ್ರತಾಪ್ ಸಾಹಿ ಆಹ್ವಾನ ನೀಡಿದರು.

ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ನಡೆದ ‘ಸಿರಿಧಾನ್ಯ ಮೇಳ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೂರ್ಯಪ್ರತಾಪ್ ಸಾಹಿ ಅವರು, ಈ ಸಂದರ್ಭ ಬಳಸಿಕೊಂಡು ಜ.22ರಂದು ರಾಮ ಮಂದಿರ ಉದ್ಘಾಟನೆ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಆಗಮಿಸುವ ಮೂಲಕ ಸಾಕ್ಷಿಯಾಗಬೇಕು ಎಂದು ಸಚಿವ ಸಾಹಿ ಆಹ್ವಾನಿಸಿದರು.

ಆನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಮರಣಿಕೆ ನೀಡಿ ಶಾಲು ಹಾಕಿ ಗೌರವಿಸಿದರು. ಈ ವೇಳೆ ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಸಚಿವರು, ಶಾಸಕರು ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News