ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; KPCC ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದೇನು?
ಬೆಂಗಳೂರು : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಮಲಿಂಗಾರೆಡ್ಡಿ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಮನಸ್ತಾಪ ಇದ್ದರೆ ಬಗೆ ಹರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಮುಂದುವರಿದು, ಪಕ್ಷಕ್ಕೆ ಹಾನಿಯಾಗುವ ಯಾವುದೇ ಕೆಲಸವನ್ನು ರಾಮಲಿಂಗಾರೆಡ್ಡಿಅವರು ಮಾಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಾಮಲಿಂಗಾ ರೆಡ್ಡಿ ಅವರು, ನನಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಸ್ವತಃ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದರು. ಆದರೆ, ಅವರು ಕೊಟ್ಟ ಮಾತು ಉಖಿಸಿಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಆತ್ಮಸಾಕ್ಷಿಗೆ ವಿರುದ್ದವಾಗಿ ಕಾರ್ಯನಿರ್ವಹಿಸಲು ನನ್ನಿಂದ ಸಾಧ್ಯವಿಲ್ಲ. ಆ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದೇನೆ. ಶಾಸಕ ಹಾಗೂ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದರು.