×
Ad

ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ : ರಾಮಲಿಂಗಾರೆಡ್ಡಿ

Update: 2025-11-02 18:25 IST

ರಾಮಲಿಂಗಾರೆಡ್ಡಿ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೆಲವು ದಿನಗಳಿಂದ ‘ರಾಮಲಿಂಗಾರೆಡ್ಡಿ ಸಿಎಂ’ ಎಂದು ಕೆಲವರು ಸುದ್ದಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ನಮ್ಮ ಸರಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನವೂ ಖಾಲಿ ಇರುವುದಿಲ್ಲ ಮತ್ತು ನಾನು ಆ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ರವಿವಾರ ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ‘ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದಲ್ಲಿ ನಮ್ಮ ಸರಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ.

ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುವುದಷ್ಟೇ ನಮ್ಮ ಗುರಿಯಾಗಿರಬೇಕು. ಪಕ್ಷ ಮತ್ತು ನಾಡಿನ ಜನತೆ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದರತ್ತ ಮಾತ್ರ ನನ್ನ ಗಮನವಿದೆ. ಆದ್ದರಿಂದ, ಪಕ್ಷದ ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಯಾರೂ ಇಂತಹ ಗೊಂದಲಕಾರಿ ಪ್ರಚಾರಕ್ಕೆ ಕಿವಿಗೊಡಬಾರದು. ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಅವರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News