×
Ad

ರಾಮಲಿಂಗಾರೆಡ್ಡಿ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ಮಾತನಾಡುವೆ: ಡಿ.ಕೆ.ಶಿವಕುಮಾರ್

Update: 2026-06-05 14:27 IST

ಬೆಂಗಳೂರು: "ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ರಾಮಲಿಂಗಾರೆಡ್ಡಿ ಅವರು ರಾಜಿನಾಮೆ ನೀಡಿರುವ ಬಗ್ಗೆ ಕೇಳಿದಾಗ, "ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ" ಎಂದು ತಿಳಿಸಿದರು.

ಕೆಲವು ಕಾರ್ಯಕರ್ತರು ರಾಜಿನಾಮೆ ನೀಡುತ್ತಿರುವ ಬಗ್ಗೆ ಕೇಳಿದಾಗ, "ಏನೇ ಇದ್ದರು ಶಿಸ್ತು ಬಹಳ ಮುಖ್ಯ" ಎಂದು ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News