×
Ad

ರಾಮನಗರ: ಟ್ಯೂಷನ್ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಗೂಡ್ಸ್ ವಾಹನ ಹರಿದು ಶಾಲಾ ಮಕ್ಕಳಿಬ್ಬರು ಮೃತ್ಯು

Update: 2023-08-09 23:06 IST

   ಮೃತ ರೋಹಿನ್ | ಶಾಲಿನಿ    (ಚಿತ್ರ ಕೃಪೆ- ಪ್ರಜಾವಾಣಿ)

ರಾಮನಗರ: ಗೂಡ್ಸ್ ವಾಹನ ಹರಿದು ಶಾಲಾ ಮಕ್ಕಳಿಬ್ಬರು ಮೃತಪಟ್ಟು, 5ಕ್ಕೂ ಹೆಚ್ಚು ಮಕ್ಕಳು ಗಾಯಗಗೊಂಡಿರುವ ಘಟನೆ ತಾಲೂಕಿನ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ವರದಿಯಾಗಿದೆ. 

ರೋಹಿನ್ (5) ಮತ್ತು ಶಾಲಿನಿ (8) ಮೃತಪಟ್ಟವರು ಎಂದು ಗುರುತಿಸಲಾಗಿದೆ. 

ಐವರು ಮಕ್ಕಳು ರಾತ್ರಿ ಸಮಾರು 8 ಗಂಟೆಗೆ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ರಸ್ತೆ ದಾಟುವಾಗ, ಮಾಗಡಿ ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಮಕ್ಕಳ ಮೇಲೆ ಹರಿದಿದೆ ಎಂದು ಹೇಳಲಾಗಿದೆ. 

ಗಂಭೀರವಾಗಿ ಗಾಯಗೊಂಡಿರುವ ಮೂವರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು,  ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News