×
Ad

ರಮೇಶ್‌ ಜಾರಕಿಹೊಳಿ ಅಶ್ಲೀಲ ಸೀಡಿ ಪ್ರಕರಣದ ದಾಖಲೆ ಕೊಟ್ಟರೆ ತನಿಖೆ: ಗೃಹ ಸಚಿವ ಪರಮೇಶ್ವರ್

Update: 2023-11-01 13:17 IST

ತುಮಕೂರು: ʼಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಸರಕಾರಕ್ಕೆ ಕೊಟ್ಟರೆ ತನಿಖೆ ನಡೆಸಲಾಗುವುದುʼ ಎಂದು ಗೃಹ ಸಚಿವ ಜಿ.ಪರಮೇಶ್ವರ ಇಲ್ಲಿ ಬುಧವಾರ ಹೇಳಿದರು.

ನಗರದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕರ ಬಳಿ ಇರುವ ದಾಖಲೆಗಳನ್ನು ಕೊಟ್ಟರೆ, ಅದರ ಆಧಾರದ ಮೇಲೆ ಪೊಲೀಸರಿಂದ ತನಿಖೆ ಮಾಡಿಸಲಾಗುವುದು. ಅನ್ಯಾಯವಾಗಿದ್ದರೆ ನ್ಯಾಯ ಒದಗಿಸಲಾಗುವುದು’ ಎಂದು ತಿಳಿಸಿದರು. 

ನನ್ನ ಸೀಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒತ್ತಾಯಿಸದ್ದ ರಮೇಶ್ ಜಾರಕಿಹೊಳಿ, ʼʼಡಿ.ಕೆ.ಶಿವಕುಮಾರ್‌ ಹನಿಟ್ರ್ಯಾಪ್ ಮೂಲಕ ನನ್ನ ಸೀಡಿ ಮಾಡಿಸಿದ್ದಾರೆ ಎಂಬುದಕ್ಕೆ ನನ್ನ ಬಳಿ ದಾಖಲೆಗಳಿವೆ. ಅವುಗಳನ್ನು ಸಿಬಿಐ ಅಧಿಕಾರಿಗಳಿಗೆ ನೀಡುತ್ತೇನೆʼʼ ಎಂದು ನಿನ್ನೆ (ಮಂಗಳವಾರ) ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News