×
Ad

ನೂರಕ್ಕೆ ನೂರರಷ್ಟು ಯತ್ನಾಳ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ: ರಮೇಶ್ ಜಾರಕಿಹೊಳಿ

Update: 2025-04-01 19:57 IST

ರಮೇಶ್ ಜಾರಕಿಹೊಳಿ

ಬೆಳಗಾವಿ: ‘ಶಾಸಕ ಯತ್ನಾಳ್ ಮತ್ತು ನಾವು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿಯೂ ನಾವು ಹೊಸ ಪಕ್ಷವನ್ನೂ ಕಟ್ಟುವುದಿಲ್ಲ’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರರಷ್ಟು ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ. ಯತ್ನಾಳ್ ಬಿಜೆಪಿ ತೊರೆದು ಎಲ್ಲಿಯೂ ಹೋಗುವುದಿಲ್ಲ, ಪಕ್ಷದಲ್ಲೇ ಇರಲಿದ್ದಾರೆ. ಆದರೆ, ಅವರ ಕುರಿತು ಅನಗತ್ಯ ತಪ್ಪು ಪ್ರಚಾರ ಮಾಡಲಾಗುತ್ತಿದೆ ಎಂದು ವಿವರಣೆ ನೀಡಿದರು.

ಹಿಂದುತ್ವಕ್ಕಾಗಿ ಆರೆಸೆಸ್ಸ್ ಇರುವಾಗ ಬೇರೆ ಪಕ್ಷದ ಅವಶ್ಯಕತೆ ಇಲ್ಲ. ಮೊನ್ನೆ ಶಾಸಕರ ಸಭೆಯಲ್ಲಿಯೂ ಚರ್ಚೆ ಆಗಿದೆ. ಬಿಜೆಪಿ ಪಕ್ಷಕ್ಕೆ ಮುಜಗುರ ಆಗುವ ಹೇಳಿಕೆ ಕೊಡಬೇಡ ಎಂದು ಹೇಳಿದ್ದೇನೆ. ಯತ್ನಾಳ್ ನಮ್ಮ ಪಕ್ಷದ ದೊಡ್ಡ ನಾಯಕರಿದ್ದರು. ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದು ದುರ್ದೈವ. ಪಕ್ಷದ ಹಿರಿಯರನ್ನು ಶೀಘ್ರವೇ ಭೇಟಿ ಮಾಡಿ ಯತ್ನಾಳ್ ಉಚ್ಚಾಟನೆ ಹಿಂಪಡೆಯುವಂತೆ ಮನವಿ ಮಾಡುತ್ತೇವೆ ಎಂದು ಅವರು ನುಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News