×
Ad

ರಮೇಶ್ ಜಾರಕಿಹೊಳಿ ಪರಿಸ್ಥಿತಿ ತಿಂದು ಎಸೆವ ಬಾಳೆ ಎಲೆಯಂತಾಗಿದೆ: ಕಾಂಗ್ರೆಸ್‌

Update: 2025-01-19 12:04 IST

ಬೆಂಗಳೂರು:  ಆಪರೇಷನ್ ಕಮಲಕ್ಕೆ ಬಲಿಯಾದ ರಮೇಶ್ ಜಾರಕಿಹೊಳಿ ಪರಿಸ್ಥಿತಿಯೂ ತಿಂದು ಎಸೆವ ಬಾಳೆ ಎಲೆಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಲೇವಡಿ ಮಾಡಿದೆ.

ಸಾಮಾಜಿಕ ಜಾಲತಾನ X ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಹತ್ತಿದ ಏಣಿಯನ್ನು ಒದೆಯುವುದು ಬಿಜೆಪಿಯ ಹಳೇ ಚಾಳಿ ಎಂದು ಅಣಕಿಸಿದೆ. 

ಸ್ವಂತ ಶಕ್ತಿಯಿಂದ ಅಧಿಕಾರದ ಹಿಡಿಯಲು ಸಾಧ್ಯವಾಗದೆ, 2019ರಲ್ಲಿ ಅನೈತಿಕ ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಸಿ ಸಮ್ಮಿಶ್ರ ಸರ್ಕಾರದ 17 ಶಾಸಕರನ್ನು ಸೆಳೆದು ಅಧಿಕಾರ ಅನುಭವಿಸಿದ ಬಿಜೆಪಿ, ಇಂದು ಅದೇ ಶಾಸಕರನ್ನು ಕಾಲಕಸದಂತೆ ಕಾಣುತ್ತಿದೆವ ಎಂದು ಟೀಕಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News