×
Ad

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : 5ನೇ ಆರೋಪಿ ಬಂಧನ

Update: 2024-05-24 20:31 IST

ಬೆಂಗಳೂರು : ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು 5ನೇ ಆರೋಪಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಹುಬ್ಬಳ್ಳಿಯ ಶೋಹೆಬ್ ಅಹ್ಮದ್ ಮಿರ್ಜಾ ಯಾನೆ ಛೋಟು(35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಎಲ್‌ಇಟಿ ಪಿತೂರಿ ಪ್ರಕರಣದಲ್ಲೂ ಶೋಹೆಬ್ ಅಹ್ಮದ್ ಶಿಕ್ಷೆಗೊಳಗಾಗಿದ್ದ ಎನ್ನಲಾಗಿದೆ . 2018ರಲ್ಲಿ ಜೈಲಿನಿಂದ ಹೊರಬಂದ ಬಳಿಕ ಸ್ಪೋಟ ಪ್ರಕರಣದ ಶಂಕಿತ ಅಬ್ದುಲ್ ಮತೀನ್ ತಾಹಾ ಎಂಬುವನ ಸ್ನೇಹ ಬೆಳೆಸಿದ್ದ. ಅಬ್ದುಲ್ ಮತೀನ್ ನಡುವಿನ ಸಂವಹನಕ್ಕಾಗಿ ತನ್ನ ಇ-ಮೇಲ್ ಐಡಿ ಸಹ ನೀಡಿದ್ದ ಎಂದು ತಿಳಿದುಬಂದಿದೆ.

4 ದಿನಗಳ ಹಿಂದಷ್ಟೇ ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದ ಹುಬ್ಬಳ್ಳಿಯಲ್ಲೂ ದಾಳಿ ನಡೆಸಿ ಶೋಹೆಬ್ ಮತ್ತು ಆತನ ಸಹೋದರನನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಹೇಳಲಾಗಿದೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಹೆಬ್ ಮಿರ್ಜಾನನ್ನು ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News