×
Ad

ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಆತಂಕ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

Update: 2024-03-01 19:11 IST

ತುಮಕೂರು: "ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ಯಾರೂ ಆತಂಕ ಪಡುವ ಅಗತ್ಯವಿಲ್ಲ" ಎಂದು ಡಿಸಿಎಂ ಡಿ.ಕೆ. ಅವರು ಶಿವಕುಮಾರ್ ತಿಳಿಸಿದರು.

ಕುಣಿಗಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಈ ಸ್ಫೋಟವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ. ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ" ಎಂದು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

"ರಾಮೇಶ್ವರಂ ಕೆಫೆ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋ ಇದೆ. ಸುಮಾರು 2 ಕಿ.ಮೀ. ವ್ಯಾಪ್ತಿಯಲ್ಲಿ ಯಾರು ಬಂದು ಹೋಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆದಿದೆ. ಸದ್ಯಕ್ಕೆ ಯಾರಿಗೂ ತೊಂದರೆ ಆಗಿಲ್ಲ. ಬೆಂಗಳೂರಿನಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೆಲವರು ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ರಕ್ಷಣೆ ನೀಡುತ್ತೇವೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News