×
Ad

ರಾಮನಗರ | ಬೈಕ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ತಂದೆ- ಮಗ ಮೃತ್ಯು

Update: 2023-11-13 11:31 IST

ರಾಮನಗರ ನ.13: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ರಾಮಮ್ಮನಕರೆ ಏರಿ ಮೇಲೆ ಸೋಮವಾರ ವರದಿಯಾಗಿದೆ.

ಸಿದ್ದಪ್ಪ (65), ಅವರ ಪುತ್ರ ಅರುಣ್ (23) ಮೃತರು ಎಂದು ಗುರುತಿಸಲಾಗಿದೆ. 

ತಿಟ್ಟಮಾರನಹಳ್ಳಿಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿದ್ದ ಬೈಕ್‌ಗೆ ಬಸ್ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಮೃತ ದೇಹಗಳು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News