ಧರ್ಮಸ್ಥಳ ದೂರು : ನ್ಯಾಯಯುತ ತನಿಖೆಗೆ ನಟಿ ರಮ್ಯಾ ಆಗ್ರಹ
ನಟಿ ರಮ್ಯಾ
ಬೆಂಗಳೂರು : ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯಿಸಿದ್ದು, ನ್ಯಾಯಯುತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ನಟಿ ರಮ್ಯಾ, ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಧರ್ಮಸ್ಥಳ ಪೂಜಾ ಸ್ಥಳವಾಗಿದ್ದು, ಕರ್ನಾಟಕದ ಜನರು ಇದನ್ನು ಹೆಚ್ಚು ಪೂಜಿಸುತ್ತಾರೆ. ಈಗಾಗಿ ನ್ಯಾಯಯುತ ತನಿಖೆ ನಡೆಯುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ನಟ ಪ್ರಕಾಶ್ ರಾಜ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಶನಿವಾರ ಮನವಿ ಮಾಡಿದ್ದಾರೆ.
ಧರ್ಮಸ್ಥಳ ದೂರು ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ಏನು ಮಾಡಬೇಕು ನೋಡುತ್ತೇವೆ. ಅಗತ್ಯ ಬಿದ್ದರೆ ಎಸ್.ಐ.ಟಿ ರಚನೆ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಹೇಳಿದ್ದರು.