×
Ad

ನಾಯಕತ್ವ ವಿಚಾರದಲ್ಲಿ ಬಹಿರಂಗ ಹೇಳಿಕೆ | ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ : ಸುರ್ಜೆವಾಲ

Update: 2025-11-21 19:21 IST

ರಣದೀಪ್‌ ಸಿಂಗ್‌ ಸುರ್ಜೆವಾಲ | PC : PTI

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಕರ್ನಾಟಕದ ಬಿಜೆಪಿ ಹಾಗೂ ಕೆಲ ಮಾಧ್ಯಮದವರು ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ಕರ್ನಾಟಕಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿರುವ ಬಗ್ಗೆ ಉಭಯ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ಐದು ಗ್ಯಾರಂಟಿಗಳ ಯಶಸ್ಸನ್ನು ದುರ್ಬಲಗೊಳಿಸುವ ಏಕೈಕ ಉದ್ದೇಶದಿಂದ ಈ ಸಂಚು ರೂಪಿಸಲಾಗಿದೆ. ಕೆಲ ಕಾಂಗ್ರೆಸ್ ನಾಯಕರು ಹಾಗೂ ಶಾಸಕರು ನೀಡುತ್ತಿರುವ ಅನಗತ್ಯ ಹೇಳಿಕೆಗಳು ಗೊಂದಲ ಸೃಷ್ಟಿಗೆ ಕಾರಣವಾಗಿವೆ ಎಂದು ಸುರ್ಜೆವಾಲ ಬೇಸರ ವ್ಯಕ್ತಪಡಿಸಿದ್ದಾರೆ.

ಪಟ್ಟಬಧ್ರ ಹಿತಾಸಕ್ತಿಗಳ ಅಪಪ್ರಚಾರ, ಕಾರ್ಯಸೂಚಿಗೆ ಯಾರೊಬ್ಬರೂ ತುತ್ತಾಗಬಾರದು ಎಂದು ಎಚ್ಚರಿಸಿದ್ದೇವೆ. ಪಕ್ಷದ ವಿವಿಧ ನಾಯಕರು, ಕಾರ್ಯಕರ್ತರ ಅಭಿಪ್ರಾಯವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ಸುರ್ಜೆವಾಲ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News