×
Ad

ರನ್ಯಾ ರಾವ್ ಚಿನ್ನ ಸಾಗಾಣಿಕೆ ಪ್ರಕರಣ | ರಾಜ್ಯದ ಹಲವೆಡೆ ಈ.ಡಿ. ದಾಳಿ

Update: 2025-03-13 15:27 IST

ನಟಿ ರನ್ಯಾ ರಾವ್

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣ ಸಂಬಂಧ ಬಂಧನವಾಗಿರುವ ಪೊಲೀಸ್ ಅಧಿಕಾರಿಯ ಪುತ್ರಿ, ನಟಿ ರನ್ಯಾ ರಾವ್ ವಿರುದ್ಧದ  ಪ್ರಕರಣ ಬಗೆದಷ್ಟು ದೊಡ್ಡದಾಗುತ್ತಾ ಇದೆ. ಈಗ ಈ ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯ(ಈ.ಡಿ) ಅಧಿಕಾರಿಗಳ ಸಹ ಧುಮುಕಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಈ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಷ್ಟು ದಿನ ರನ್ಯಾ ರಾವ್ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ಡಿಆರ್​ಐ ಅಧಿಕಾರಿಗಳು ಮಾತ್ರ ವಿಚಾರಣೆ ನಡೆಸುತ್ತಿದ್ದರು. ಈಗ ಕೇಸ್​ನಲ್ಲಿ ಈಡಿಯಿಂದ ಇಸಿಐಆರ್ ದಾಖಲಾಗಿದೆ. ಇಸಿಐಆರ್ ದಾಖಲಿಸಿಕೊಂಡಿರುವ ಈ.ಡಿ, ಚಿನ್ನ ಕಳ್ಳಸಾಗಾಣಿಕೆ ವೇಳೆ ಹಣದ ಅಕ್ರಮ ವರ್ಗಾವಣೆ ಆಗಿರುವ ಆಯಾಮದಲ್ಲಿ ತನಿಖೆ ಆರಂಭಿಸಿದೆ ಎಂದು ತಿಳಿದು ಬಂದಿದೆ.

ನಟಿ ರನ್ಯಾ ರಾವ್ ಮನೆ, ಉದ್ಯಮಿ ತರುಣ್‌ ರಾಜ್ ಮತ್ತು ಕೆಲ ಪೊಲೀಸ್‌ ಅಧಿಕಾರಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News