×
Ad

ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನಗಿಲ್ಲ ಜಾಮೀನು, ಮೂವರಿಗೆ ರಿಲೀಫ್

Update: 2024-10-14 20:27 IST

ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರು ಆರೋಪಿಗಳಿಗೆ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಪ್ರಕರಣದ ಜಾಮೀನು ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್‍ಗೌಡ, ಕಿರಣ್‍ಕುಮಾರ್ ಮತ್ತು ಮಂಜುನಾಥ ಎಂಬುವರಿಗೆ ಜಾಮೀನು ನೀಡಿ ಆದೇಶಿಸಿದ್ದಾರೆ.

ಅತ್ಯಾಚಾರ, ಹನಿಟ್ರ್ಯಾಪ್ ಆರೋಪದಡಿ 40 ವರ್ಷ ವಯಸ್ಸಿನ ಸಂತ್ರಸ್ತ ಮಹಿಳೆಯೊಬ್ಬರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನನ್ವಯ ಶಾಸಕ ಮುನಿರತ್ನ, ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ, ಲೋಕಿ ಎಂಬವರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ಸಂಬಂಧ ಆರೋಪಿಗಳನ್ನು ಬಂಧಿಸಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News