×
Ad

ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ‌ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Update: 2024-11-22 16:42 IST

ಬೆಂಗಳೂರು : ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿ ಆದೇಶಿದೆ.

ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿತು

ಅರ್ಜಿದಾರರ ಪರ ವಕೀಲ ಜಿ.ಅರುಣ್‌ ಅವರು ಅರ್ಜಿ ಹಿಂಪಡೆಯಲಾಗುವುದು. ಈ ಪ್ರಕರಣದಲ್ಲಿ ಆರೋಪ ಪಟ್ಟಿ ನೀಡಲಾಗಿಲ್ಲ ಎಂದರು. ಆಗ ಪೀಠವು ಹಾಲಿ ಪ್ರಕರಣದಲ್ಲಿ ಆರೋಪ ಪಟ್ಟಿಯನ್ನು ಪರಿಗಣಿಸಿಯೇ ಇಲ್ಲ. ದೂರನ್ನಷ್ಟೇ ಆಧರಿಸಿ, ವಜಾ ಮಾಡಲಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News