×
Ad

ರ‍್ಯಾಪಿಡೋ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ : ಹೈಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಆದೇಶ

Update: 2025-04-25 22:27 IST

ರಾಮಲಿಂಗಾರೆಡ್ಡಿ

ಬೆಂಗಳೂರು: ರ‍್ಯಾಪಿಡೋ, ಊಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತಾಗಿ ಸಾರಿಗೆ ಇಲಾಖೆಯ ಕಾರ್ಯದರ್ಶಿ, ಆಯುಕ್ತರಿಗೆ ಪತ್ರ ಬರೆದಿರುವ ರಾಮಲಿಂಗಾರೆಡ್ಡಿ, ಹೈಕೋರ್ಟ್‍ನ ಆದೇಶವನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮುಂದಿನ 6 ವಾರಗಳಲ್ಲಿ ರ‍್ಯಾಪಿಡೋ ಸೇರಿದಂತೆ ಇತರ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಮಾಡುವಂತೆ ಸೂಚಿಸಿ ಹೈಕೋರ್ಟ್ ಎ.2ರಂದು ರಾಜ್ಯ ಸರಕಾರಕ್ಕೆ ಆದೇಶ ನೀಡಿತ್ತು. ಸರಕಾರಿ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 3ರಡಿ ಮಾರ್ಗಸೂಚಿಗಳನ್ನು ರೂಪಿಸಬೇಕು, ಅಲ್ಲಿಯವರೆಗೆ ಯಾವುದೇ ರ‍್ಯಾಪಿಡೋ, ಊಬರ್ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News