×
Ad

ಸಿದ್ದರಾಮಯ್ಯರ ಕುರ್ಚಿಗೆ ಬಂದಿರುವ ಕಂಟಕವನ್ನು ಸ್ವತಃ ಆ ವಿಘ್ನ ವಿನಾಯಕನೂ ತಪ್ಪಿಸಲಾರ : ಆರ್.ಅಶೋಕ್

Update: 2024-09-07 21:15 IST

ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ದಿನ ಬೆಳಗಾದರೆ ಒಬ್ಬರಲ್ಲ‌ ಒಬ್ಬ ನಾಯಕರು ಮುಖ್ಯಮಂತ್ರಿ ಕುರ್ಚಿ ಮೇಲೆ ಟವಲ್ ಹಾಕುತ್ತಿದ್ದು, ಈ ರಾಜಕೀಯ ಮೇಲಾಟಕ್ಕೆ ಹಬ್ಬದ ದಿವಸವೂ ವಿರಾಮ ವಿಲ್ಲದಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಟೀಕಿಸಿದ್ದಾರೆ.

ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಹೇಳಿಕೆ ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.

'ಒಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಬಂದಿರುವ ಕಂಟಕವನ್ನ ಸ್ವತಃ ಆ ವಿಘ್ನ ವಿನಾಯಕನೂ ತಪ್ಪಿಸಲಾರ ಅನ್ನಿಸುತ್ತಿದೆʼ ಎಂದು ಅಶೋಕ್‌ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News