×
Ad

ಕೆಎಂಎಫ್ ಎಂ.ಡಿ. ವರ್ಗಾವಣೆ | ಖಾಸಗಿ ಕಂಪೆನಿಗಳ ಲಾಬಿಗೆ ಸರಕಾರ ಮಣಿದಿದೆಯಾ? : ಆರ್.ಅಶೋಕ್

Update: 2024-12-05 19:01 IST

ಆರ್.ಅಶೋಕ್

ಬೆಂಗಳೂರು : ‘ಅತ್ಯಂತ ಬೇಡಿಕೆ ಇರುವ ರೆಡಿಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೊಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ‘ನಂದಿನಿ' ಬ್ರ್ಯಾಂಡ್‍ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್ ಎಂಡಿ ಎಂ.ಕೆ.ಜಗದೀಶ್‍ರನ್ನ ದಿಢೀರನೆ ವರ್ಗಾವಣೆ ಮಾಡಿರುವ ಸರಕಾರದ ನಿರ್ಧಾರ ಸಾರ್ವಜನಿಕರಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸಂಶಯ ವ್ಯಕ್ತಪಡಿಸಿದ್ದಾರೆ.

ಗುರುವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಸರಕಾರದ ಈ ನಿರ್ಧಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆಯಾ? ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಪರಿಚಯಿಸಲು ಹೊರಟಿದ್ದ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರದಂತೆ ಖಾಸಗಿ ಕಂಪೆನಿಗಳ ಲಾಭಿಗೆ ಸರಕಾರ ಮಣಿದಿದೆಯಾ?’ ಎಂದು ಪ್ರಶ್ನಿಸಿದ್ದಾರೆ.

‘ಈ ಅನುಮಾನಗಳ ಕುರಿತಂತೆ ಮತ್ತು ನಂದಿನಿ ಬ್ರ್ಯಾಂಡ್‍ನ ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಯೋಜನೆಯಲ್ಲಿ ಏನಾದರೂ ಬದಲಾವಣೆ ಇದೆಯೇ ಎನ್ನುವ ಕುರಿತಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟನೆ ನೀಡಬೇಕುʼ ಎಂದು ಅಶೋಕ್ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News