×
Ad

ಕಲಬುರಗಿ ಡಿಸಿ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ ಪ್ರಕರಣ | ಬಲವಂತ ಕ್ರಮ ತೆಗೆದುಕೊಳ್ಳದಂತೆ ನೀಡಿದ್ದ ಆದೇಶ ವಿಸ್ತರಣೆ

Update: 2025-06-20 22:20 IST

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶ ವಿಸ್ತರಿಸಿ ಹೈಕೋರ್ಟ್ ಆದೇಶಿದೆ.

ಎಫ್‌ಐಆರ್ ರದ್ದು ಕೋರಿ ಎನ್.ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅವಹೇಳನಕಾರಿ ಹೇಳಿಕೆ ಸಂಬಂಧ ಎಫ್‌ಐಆರ್ ಕುರಿತು ಹೈಕೋರ್ಟ್ ಸಲಹೆಯಂತೆ ʼಜಿಲ್ಲಾಧಿಕಾರಿಗಳ ಬಳಿ ಕ್ಷಮೆ ಕೇಳಲಾಗಿದೆʼ ಎಂದು ಎನ್.ರವಿಕುಮಾರ್ ಪರ ವಕೀಲ ಎಂ.ವಿನೋದ್ ಕುಮಾರ್ ಮಾಹಿತಿ ನೀಡಿದರು.

ಈ ವೇಳೆ ಕ್ಷಮೆ ಕೇಳಲು ತೆರಳುವಾಗಲೂ ಎನ್.ರವಿಕುಮಾರ್ ದೊಡ್ಡ ರ್ಯಾಲಿ ನಡೆಸಿದ್ದಾರೆ ಎಂದು ಹೈಕೋರ್ಟ್‌ಗೆ ಹೆಚ್ಚುವರಿ ಎಸ್‌ಪಿಪಿ ಬಿ.ಎನ್.ಜಗದೀಶ್ ಮಾಹಿತಿ ನೀಡಿದರು.

ವಾದ-ಪ್ರತಿವಾದ ಆಲಿಸಿ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶ ವಿಸ್ತರಣೆ ಮಾಡಿ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News