×
Ad

ಐಪಿಎಲ್ ಫೈನಲ್‌ | ಆರ್‌ಸಿಬಿ ತಂಡಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

Update: 2025-06-03 13:59 IST

ಬೆಂಗಳೂರು : ಹದಿನೆಂಟನೇ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯು ಅಂತಿಮ ಘಟ್ಟ ತಲುಪಿದ್ದು, ಮಂಗಳವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಪ್ರತಿಷ್ಠಿತ ಟ್ರೋಫಿಗಾಗಿ ಹೋರಾಡಲಿವೆ.

4ನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿರುವ ಆರ್‌ಸಿಬಿ ಈ ಹಿಂದೆ 2009, 2011 ಹಾಗೂ 2016ರಲ್ಲಿ ಪ್ರಶಸ್ತಿ ವಂಚಿತವಾಗಿತ್ತು. ಈ ಬಾರಿಯಾದರೂ ಕಪ್ ಗೆಲ್ಲಲಿ ಎಂಬುದು ಆರ್‌ಸಿಬಿ ಅಭಿಮಾನಿಗಳ ಹಾರೈಕೆಯಾಗಿದೆ.

ಇನ್ನೂ ಫೈನಲ್ ಪಂದ್ಯ ಆಡುತ್ತಿರುವ ಆರ್‌ಸಿಬಿ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು. ಆರ್‌ಸಿಬಿ ತಂಡದ ಸೋಲು - ಗೆಲುವು, ಏಳು - ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ - ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ. "ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ", ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News