×
Ad

ಕಾಲ್ತುಳಿತ ಘಟನೆಗೆ ತಡವಾಗಿ ವಿಷಾದ ವ್ಯಕ್ತಪಡಿಸಿದ ಆರ್‌ಸಿಬಿ

Update: 2025-06-04 23:09 IST

PC : PTI 

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 11 ಮಂದಿ ಮೃತಪಟ್ಟ ಘಟನೆಗೆ ರೋಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ತಡವಾಗಿ ವಿಷಾದ ವ್ಯಕ್ತಪಡಿಸಿದೆ.

ಆರ್‌ ಸಿ ಬಿ ತಂಡದ ನೆಚ್ಚಿನ ಆಟಗಾರರನ್ನು ನೋಡಲು ಅಭಿಮಾನಿಗಳು ಸ್ಟೇಡಿಯಂ ಒಳಗೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿತು. ಆದರೆ ನಿಗದಿಯಾಗಿದ್ದ ಸಂಭ್ರಮಾಚರಣೆ ಕಾರ್ಯಕ್ರಮವು ನಡೆಯಿತು. ಆರ್ ಸಿ ಬಿ ಕಡೆಯಿಂದ ದುರಂತಕ್ಕೆ ವಿಷಾದ ವ್ಯಕ್ತಪಡಿಸುವ ಯಾವುದೇ ಅಧಿಕೃತ ಹೇಳಿಕೆಗಳು ಬರದಿದ್ದುದಕ್ಕೆ ಜನರು ತೀವ್ರ ಆಕೋಶ ವ್ಯಕ್ತಪಡಿಸಿದರು.

ಟೀಕೆಗಳ ಸುರಿಮಳೆಯ ನಂತರ ಆರ್‌ಸಿಬಿ ತಂಡ ಕೊನೆಗೂ ಪ್ರತಿಕ್ರಿಯಿಸಿದ್ದು, ಕಾಲ್ತುಳಿತ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದೆ. ಕಾಲ್ತುಳಿತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾದ ವಿಚಾರ. ಜೀವಹಾನಿಗೆ ಆರ್‌ಸಿಬಿ ತಂಡವು ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ಸಂತಾಪವನ್ನು ಸೂಚಿಸುತ್ತದೆ ಎಂದು ಪೋಸ್ಟ್‌ ಹಂಚಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News