×
Ad

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ RCB

Update: 2025-07-08 22:51 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ನಡೆದಿದ್ದ ಕಾಲ್ತುಳಿತ ಪ್ರಕರಣ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್‌ ಪ್ರಕರಣದ ಆದೇಶದಲ್ಲಿ ಘಟನೆಗೆ ತಾನೇ ಕಾರಣ ಎಂದು ಆದೇಶದಲ್ಲಿರುವ ಅಂಶಗಳನ್ನು ಉಲ್ಲೇಖ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ)ಯ ಆದೇಶ ಪ್ರಶ್ನಿಸಿ ರಾಯಲ್‌ ಚಾಂಲೆರ್ಸ್‌ ಬೆಂಗಳೂರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ತನ್ನ ಅಮಾನತು ಮಾಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ವಿಕಾಸ್‌ ಕುಮಾರ್ ಸಿಎಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ, ಸರ್ಕಾರದ ಆದೇಶ ರದ್ದುಪಡಿ, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿ ಹೆಚ್ಚು ಜನ ಆಗಮಿಸುವುದಕ್ಕೂ, ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಕಾಲ್ತುಳಿತ ನಡೆದಿರುವುದಕ್ಕೆ ಮೇಲ್ನೋಟಕ್ಕೆ ಆರ್‌ಸಿಬಿಯೇ ಕಾರಣ ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಸರ್ಕಾರದಿಂದ ಸೂಕ್ತ ರೀತಿಯ ಅನುಮತಿ ಪಡೆಯದೆ ಅತಿ ಹೆಚ್ಚು ಜನ ಆಗಮಿಸುವುದಕ್ಕೆ ಕಾರಣವಾಗಿತ್ತು. ಇದೇ ಕಾರಣದಿಂದ ಪೊಲೀಸರು ಸೂಕ್ತ ಭದ್ರತೆ ಒದಗಿಸಿ ಜನ ದಟ್ಟಣೆಯನ್ನು ನಿಯಂತ್ರಣ ಮಾಡುವುದಕ್ಕೆ ಕಷ್ಟ ಸಾಧ್ಯವಾಗಿತ್ತು. ಇದೇ ಕಾರಣದಿಂದ ಕಾಲ್ತುಳಿತ ನಡೆದಿದೆ. ಪೊಲೀಸರ ಅನುಮತಿಯಿಲ್ಲದೆ ಆರ್ಸಿಬಿ ವಿಜಯೋತ್ಸವ ಮೆರವಣಿಗೆಯ ಆಹ್ವಾನಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿತ್ತು. ಇದರಿಂದ ಭಾರಿ ಜನ ಸಮೂಹ ಸೇರಲು ಕಾರಣವಾಯಿತು ಮತ್ತು ಪೊಲೀಸರಿಗೆ ಎಲ್ಲಾ ತಯಾರಿ ಮಾಡಿಕೊಳ್ಳಲು ಸಾಕಷ್ಟು ಸಮಯವಿರಲಿಲ್ಲ. ಕೇವಲ 12 ಗಂಟೆಗಳಲ್ಲಿ ಪೊಲೀಸರು ಸಂಪೂರ್ಣ ವ್ಯವಸ್ಥೆ ಮಾಡುತ್ತಾರೆಂದು ನಿರೀಕ್ಷಿಸಲಾಗುವುದಿಲ್ಲ ಎಂದು ತಿಳಿಸಿತ್ತು.

ಇದೀಗ ಈ ಆದೇಶವನ್ನು ಪ್ರಶ್ನಿಸಿರುವ ಆರ್‌ಸಿಬಿ, ಸಿಎಟಿಯ ನೀಡಿದ್ದ ಆದೇಶದಲ್ಲಿನ ಅಂಶಗಳು ತಮ್ಮ ವಿರುದ್ಧ ಇದ್ದು, ತಮ್ಮ ವಾದ ಆಲಿಸುವುದಕ್ಕೂ ಮುನ್ನವೇ ತಮ್ಮ ವಿರುದ್ಧವಾಗಿ ಆದೇಶವನ್ನು ನೀಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಅರ್ಜಿ ವಿಚಾರಣೆಗೆ ಬರಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News