×
Ad

ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ಸಿದ್ದ: ರಾಜ್ಯ ಚುನಾವಣಾ ಆಯುಕ್ತ

Update: 2025-09-05 23:36 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಲು ಸಿದ್ದವಿದ್ದೇವೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ. ಎಸ್. ಸಂಗ್ರೇಶಿ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಚುನಾವಣೆಗಳಿಗೂ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಮತ್ತು ಮತದಾರರ ಪಟ್ಟಿ ಸಿದ್ಧಪಡಿಸುವ ಜವಾಬ್ದಾರಿಯನ್ನು ರಾಜ್ಯ ಸರಕಾರ ಆಯೋಗಕ್ಕೆ ವಹಿಸದರೆ ಆ ಕಾರ್ಯಕ್ಕೆ ನಾವು ಮುಂದಾಗಲಿದ್ದೇವೆ ಎಂದರು.

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ನವೆಂಬರ್ 1ರೊಳಗೆ ಕ್ಷೇತ್ರಗಳ ಮರು ವಿಂಗಡಣೆ ಮತ್ತು ನವೆಂಬರ್ 30ರೊಳಗೆ ವಾರ್ಡ್ ವಾರು ಮೀಸಲಾತಿ ಪಟ್ಟಿ ಪ್ರಕಟಿಸಲು ಸರಕಾರವು ಸಿದ್ದತೆ ನಡೆಸಿದೆ ಎಂದು ಸಂಗ್ರೇಶಿ ವಿವರಿಸಿದರು.

ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಿ ಗ್ರಾ.ಪಂ., ತಾ.ಪಂ ಹಾಗೂ ಜಿಲ್ಲಾ ಪಂಚಾಯತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋ ಸಿದ್ಧವಿದೆ ಎಂದು ಸಂಗ್ರೇಶಿ ಮಾಹಿತಿ ನೀಡಿದರು.

ರಾಜ್ಯ ಚುನಾವಣಾ ಆಯೋಗವು ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗದಷ್ಟೇ ಅಧಿಕಾರವನ್ನು ಹೊಂದಿದೆ ಎಂದು ಅವರು, ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್‌ಗಳನ್ನೇ ಬಳಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮತದಾರರಿಗೆ ಬ್ಯಾಲೆಟ್ ಪೇಪರ್‌ಗಳ ಬಗ್ಗೆ ಅರಿವಿದೆ. ಬ್ಯಾಲೆಟ್ ಪೇಪರ್‌ಗೆ ಬದಲಾಗುವುದರಲ್ಲಿ ಯಾವುದೇ ತಪ್ಪು ಇಲ್ಲ ಸ್ಪಷ್ಟಪಡಿದಿದರು.

ರಾಜ್ಯ ಸರಕಾರ ಬ್ಯಾಲೆಟ್ ಪೇಪರ್ ಬಳಕೆ ಮಾಡಿ ಚುನಾವಣೆ ನಡೆಸುವ ಸಂಬಂಧ ನೀತಿ ರೂಪಿಸಿ ಶಿಫಾರಸು ಮಾಡಿದರೆ, ಆಯೋಗವು ಕ್ರಮ ವಹಿಸಲಿದೆ. ಅಲ್ಲದೆ, ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News