ಭೋವಿ ಅಧ್ಯಯನ ಪೀಠ ರಚನೆ ಮಾಡಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-11-23 12:37 GMT

ಬಾಗಲಕೋಟೆ: ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಗುರುವಾರ ಬಾಗಲಕೋಟೆಯಲ್ಲಿ ಶ್ರೀ ಶರಣಬಸವ ಸ್ವಾಮಿಗಳ ಸಂಸ್ಮರಣೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೋವಿ ಸಮುದಾಯದ ಕುಲಗುರು ಶರಣಬಸವ ಅಪ್ಪಂಗಳ್ ಅವರ ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಭೋವಿ ಅಭಿವೃದ್ಧಿ ನಿಗಮ ಮಾಡುವ ಭರವಸೆ ನಾನು ನೀಡಿದ್ದೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಅಭಿವೃದ್ಧಿ ನಿಗಮ ಮಾಡಿದೆ. ಈಗಲೂ ನಿಮ್ಮ ಬೇಡಿಕೆ ಈಡೇರಿಸಲು ನಾನು ಸಿದ್ದ. ಭೋವಿ ಸಮಾಜದ ಹಿತ ಕಾಯುವ ಪಕ್ಷ ನಮ್ಮದು. ನಾನು ಸಮುದಾಯಕ್ಕೆ ಆರ್ಥಿಕ ಶಕ್ತಿ ನೀಡುತ್ತೇನೆ. ನಿಮ್ಮ ಆಶೀರ್ವಾದ ನಮಗಿರಲಿ. ನಾನು ಸಿದ್ದರಾಮೇಶ್ವರರ ವಚನಗಳಲ್ಲಿ, ಆಶಯಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಭೋವಿ ಗುರುಪೀಠದ ಶ್ರೀ ನಿರಂಜನ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಮಾನಪ್ಪ ವಜ್ಜಲ್ ಸೇರಿದಂತೆ ಹಲವು ಶಾಸಕರು, ಮಾಜಿ ಶಾಸಕರು ಮತ್ತು ಭೋವಿ, ಕೊರಮ, ಕೊರಚ ಸಮುದಾಯಗಳ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News