×
Ad

ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಮಳೆ: ದ.ಕ, ಉಡುಪಿ ಸಹಿತ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Update: 2025-05-24 20:50 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೇ 25ರಿಂದ ಮೇ 28ರವರಗೆ ರಾಜ್ಯದಾದ್ಯಂತ ಧಾರಾಕಾರವಾಗಿ ಮಳೆಯಾಗಲಿದೆ. ಈ ನಾಲ್ಕು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡಿನ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಚಾಮರಾಜನಗರಗಳಲ್ಲೂ ಧಾರಾಕಾರವಾಗಿ ಮಳೆ ಸುರಿಯಲಿದ್ದು, ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News