×
Ad

ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವುದು ಅತ್ಯಂತ ಹೇಯ ಕೃತ್ಯ: FCI ವಿರುದ್ಧ 'ನೈಜ ಹೋರಾಟಗಾರರ ವೇದಿಕೆ' ಆಕ್ರೋಶ

Update: 2023-07-12 14:00 IST

ಎಚ್.ಎಂ ವೆಂಕಟೇಶ್

ಬೆಂಗಳೂರು: ಭಾರತ ಸರ್ಕಾರದ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (FCI ) ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವುದು ಅತ್ಯಂತ ಹೇಯ ಕೃತ್ಯ ಎಂದು 'ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

FCI  ಕ್ರಮ ಖಂಡಿಸಿ ಜುಲೈ 21 ರಂದು (ಶುಕ್ರವಾರ) ವಿಧಾನಸೌಧ ಮತ್ತು ವಿಕಾಸ ಸೌಧದ ಮಧ್ಯದಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಎದುರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದಕ್ಕೆ ಅನುಮತಿ ಕೋರಿ ನೈಜ ಹೋರಾಟಗಾರರ ವೇದಿಕೆಯ ಪರವಾಗಿ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ಬರೆದಿರುವ ಅವರು, ''ಕರ್ನಾಟಕ ರಾಜ್ಯ ಸರ್ಕಾರವು ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಹೊರಟಿರುವುದು ಶ್ಲಾಘನೀಯ, ಕರ್ನಾಟಕ ರಾಜ್ಯದಲ್ಲಿ ಯಾವುದೇ ಒಬ್ಬ ವ್ಯಕ್ತಿ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ನೀಡಲು ನಿರ್ಧರಿಸಿದ್ದು ಸರಿ. ಅಷ್ಟೇ, ಆದರೆ ಭಾರತ ಸರ್ಕಾರದ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದವರು ಮೊದಲು ಅಕ್ಕಿಯನ್ನು ಸರಬರಾಜು ಮಾಡುವುದಾಗಿ ಹೇಳಿ ನಂತರ ನಿರಾಕರಿಸಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ' ಎಂದು ತಿಳಿಸಿದ್ದಾರೆ. 

''ರಾಜ್ಯ ಸರ್ಕಾರವು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದವರು ಅಕ್ಕಿ ಕೊಡುವುದಿಲ್ಲ ಎಂದು ಹೇಳಿದ ನಂತರ ಬಡವರ ಖಾತೆಗೆ ಹಣ ಜಮಾ ಮಾಡುತ್ತಿರುವುದು ಸಮಂಜಸವಲ್ಲ ಮತ್ತು ನ್ಯಾಯ ಸಮ್ಮತವಲ್ಲ. ಹಸಿದವರಿಗೆ ಹಣ ಕೊಡುವ ಬದಲು ಅನ್ನ ಕೊಡುವ ಸರ್ಕಾರದ ಮೊದಲಿನ ನಿರ್ಧಾರವನ್ನೇ ಮುಂದುವರಿಸಲು ಹೋಗಬೇಕು. ಆದರೆ ಕೇಂದ್ರ ಸರ್ಕಾರವು ವುಡ್ ಕಾರ್ಪೋರೇಷನ್ ಆಫ್ ಇಂಡಿಯಾದಿಂದ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವುದು ಅತ್ಯಂತ ಹೇಯ ಕೃತ್ಯವಾಗಿದೆ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

''ಆಹಾರ ದಾಸ್ತಾನುಗಳನ್ನು ಕಾಲಕಾಲಕ್ಕನುಗುಣವಾಗಿ ವಿತರಣೆ ಮಾಡುವ ಗುರುತರ ಜವಾಬ್ದಾರಿ ಹೊಂದಿರುವ ಆಫ್ ಇಂಡಿಯಾ ಮೂಲ ಉದ್ದೇಶವನ್ನ ಉಲ್ಲಂಘಿಸಿ ಅದು ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಎನ್ ಡಿಎ ಆಗಲು ಹೊರಟಿರುವುದು ದುರದೃಷ್ಟಕರ ಸಂಗತಿಯಾಗಿದೆ'' ಎಂದು ಎಚ್.ಎಂ ವೆಂಕಟೇಶ್ ಪತ್ರದಲ್ಲಿ ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News