×
Ad

ಸದ್ಯಕ್ಕೆ ನಳಿನ್ ಕುಮಾರ್​ರನ್ನು ಅಧ್ಯಕ್ಷ ಸ್ಥಾನದಿಂದ ತೆಗೆಯುವ ಸಂದರ್ಭ ಕಾಣುತ್ತಿಲ್ಲ: ಆರ್. ಅಶೋಕ್

Update: 2023-06-24 14:29 IST

ಚಿಕ್ಕಮಗಳೂರು: 'ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್​ ಕುಮಾರ್ ಕಟೀಲು ಇದ್ದಾರೆ. ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ' ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದ್ದಾರೆ. 

ಶನಿವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಲೋಕಸಭೆ ಚುನಾವಣೆ ಇದೆ, ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ'' ಎಂದು ಹೇಳಿದರು. 

''ನಮ್ಮದು ರಾಷ್ಟ್ರೀಯ ಪಕ್ಷ, ಅವರು ರಾಜೀನಾಮೆ ಕೊಟ್ಟರೂ, ದೆಹಲಿ ನಾಯಕರು ಅಂಗೀಕಾರ ಮಾಡಬೇಕಲ್ವಾ? ಲೋಕಸಭೆ ಚುನಾವಣೆ ಇದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ'' ಎಂದು ಅವರು ಹೇಳಿದರು. 

ಇದೇ ವೇಳೆ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಮಾತನಾಡಿದ ಅಶೋಕ್, ''ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ. ಈಗಾಗಲೇ ವರಿಷ್ಠರು ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ'' ಎಂದು ತಿಳಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News