×
Ad

ರೇಣುಕಾ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ: ಸಚಿವ ಡಿ.ಕೆ.ಶಿವಕುಮಾರ್

Update: 2023-12-12 20:04 IST

ಬೆಳಗಾವಿ: ‘ರೇಣುಕಾ ಏತ ನೀರಾವರಿ ಯೋಜನೆ ಸೇರಿ ಬಾಕಿ ಇರುವ ಏತ ನೀರಾವರಿ ಯೋಜನೆಗಳ ಹಳೆಯ ರಿವರ್ ಸೈಪನ್ ಬದಲಾಗಿ ಹೊಸ ತಂತ್ರಜ್ಞಾನದ ಮೂಲಕ ನೀರಾವರಿ ಸೌಲಭ್ಯವನ್ನು ಮತ್ತೆ ಒದಗಿಸಲಾಗುವುದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ವಿಶ್ವಾಸ್ ವಸಂತ್ ವೈದ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೊಸ ತಂತ್ರಜ್ಞಾನದ ಮೂಲಕ ಮತ್ತೆ ನೀರಾವರಿ ಸೌಲಭ್ಯ ಕಲ್ಪಿಸಲು ವಿವರವಾದ ಅಂದಾಜು ಪಟ್ಟಿ ತಯಾರಿಸುವ ಜವಾಬ್ದಾರಿಯನ್ನು ಸರ್ವೇ ಸಂಸ್ಥೆಗೆ ನೀಡಲಾಗಿದ್ದು, ಕೆಲಸ ಪ್ರಗತಿಯಲ್ಲಿದೆ’ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News