×
Ad

ರೇಣುಕಾಸ್ವಾಮಿ ಕೊಲೆ ಪ್ರಕರಣ | ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್‍ಶೀಟ್ ಸಲ್ಲಿಸುವ ಸಾಧ್ಯತೆ!

Update: 2024-08-21 21:28 IST
ದರ್ಶನ್‌/ರೇಣುಕಾಸ್ವಾಮಿ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪಣ ಪಟ್ಟಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸೆಪ್ಟೆಂಬರ್ ಮೊದಲ ವಾರದಲ್ಲಿ ಸಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ವಿಜಯನಗರದ ಉಪ ವಿಭಾಗದ ಪೊಲೀಸರು, ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಚಾರ್ಜ್‍ಶೀಟ್ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಈಗಾಗಲೇ ಶೇ.70ರಷ್ಟು ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ ಎಂದು ಗೊತ್ತಾಗಿದೆ.

ಬೆಂಗಳೂರಿನ ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ಸಾಕ್ಷ್ಯಗಳ ಪೈಕಿ ಶೇ.90ರಷ್ಟು ವರದಿ ಬಂದಿದೆ. ಅಲ್ಲದೆ, ಹೈದರಾಬಾದ್‍ಗೆ ಕಳುಹಿಸಿದ್ದ ವಸ್ತುಗಳಲ್ಲಿ ಶೇ.70ರಷ್ಟು ವರದಿಗಳು ಬಂದಿವೆ. ಉಳಿದ ವರದಿಗಾಗಿ ಕಾಯಲಾಗುತ್ತಿದೆ.

ಈಗಾಗಲೇ ಈ ಪ್ರಕರಣದ ವೈದ್ಯಕೀಯ ವರದಿ ಹಾಗೂ ಅದಕ್ಕೆ ಸಂಬಂಧಿಸಿದ ಕೆಲವು ಪೂರಕ ದಾಖಲೆಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ. ಅಲ್ಲದೆ, ಬಹಳಷ್ಟು ಮಂದಿ ಸಾಕ್ಷಿಗಳಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದು, ಶೀಘ್ರದಲ್ಲೇ ಚಾರ್ಜ್‍ಶೀಟ್ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News