×
Ad

ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ : ದರ್ಶನ್, ಸಹಚರರ ಕೃತ್ಯದ ಫೋಟೋಗಳು ವೈರಲ್!

Update: 2024-09-05 16:27 IST
  • ಹತ್ಯೆಯಾದ ರೇಣುಕಾಸ್ವಾಮಿ

ಬೆಂಗಳೂರು : ನಟ ದರ್ಶನ್ ಮತ್ತು ಸಹಚರರು ಸೇರಿಕೊಂಡು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹಲ್ಲೆ ಮಾಡಿ ಬಳಿಕ ಕೊಲೆಗೈದಿರುವ ಆರೋಪವಿದ್ದು, ಅದಕ್ಕೆ ಸಂಬಂಧಿಸಿದಂತೆ ಕೆಲವು ಫೋಟೋಗಳು ದತ್ತಾಂಶ ಮರುಸಂಗ್ರಹದ ವೇಳೆ ಲಭ್ಯವಾಗಿವೆ.

ಆರೋಪಿಗಳ ಮೊಬೈಲ್‌ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ನಗರದ ಪಟ್ಟಣಗೆರೆ ಶೆಡ್‌ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಅನಾಥವಾಗಿ ಬಿದ್ದಿರುವ ಫೋಟೋಗಳು ಪೊಲೀಸರಿಗೆ ಲಭಿಸಿದೆ ಎಂದು ತಿಳಿದು ಬಂದಿದೆ.

ಕೊಲೆಯಾದ ರೇಣುಕಾಸ್ವಾಮಿ ಫೋಟೋಗಳನ್ನು ಎ10 ಆರೋಪಿಯಾಗಿರುವ ವಿನಯ್ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದನು. ಫೋಟೋ ಕ್ಲಿಕ್ಕಿಸಿ ಬಳಿಕ ಮೊಬೈಲ್‌ನಿಂದ ಡಿಲೀಟ್ ಮಾಡಿದ್ದನು. ಆದರೆ, ವಿಧಿ ವಿಜ್ಞಾನ ತಂಡ ಡಿಲೀಟ್ ಆದ ಫೋಟೋಗಳನ್ನು ರಿಟ್ರೀವ್ ಮಾಡಿದ್ದು, ವಿನಯ್ ಮೊಬೈಲ್‌ನಲ್ಲಿದ್ದ 10ಕ್ಕೂ ಹೆಚ್ಚು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News