×
Ad

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಚಾರ್ಜ್‌ಶೀಟ್‌ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ

Update: 2024-09-10 12:35 IST

ದರ್ಶನ್(PC:x@dasadarshan)

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ‌ ಹತ್ಯೆ ಪ್ರಕರಣದ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಲ್ಲಿಸಿರುವ ಚಾರ್ಜ್‌ಶೀಟ್ ಮತ್ತು ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ ಅವರಿದ್ದ ಏಕಸದಸ್ಯ ಪೀಠ, ಯಾವುದೇ ರಹಸ್ಯ ಮಾಹಿಯನ್ನು ಪ್ರಾಸಾರ ಮಾಡದಂತೆ ನಿರ್ಬಂಧ ವಿಧಿಸಿ ಆದೇಶಿದೆ.

ಅಲ್ಲದೆ, ಮೇಲಿನ ಆದೇಶ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೆಯೇ ಈ ಆದೇಶವನ್ನು ಪ್ರತಿವಾದಿ ಮಾಧ್ಯಮಗಳಿಗೆ ರವಾನಿಸಲು ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News