×
Ad

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿ ವಜಾ

Update: 2025-11-08 12:50 IST

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ, ರದ್ದುಗೊಂಡಿರುವ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​​ ವಜಾಗೊಳಿಸಿ ಆದೇಶಿಸಿದೆ.

ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಕಳೆದ ಆಗಸ್ಟ್ 14ರಂದು ಕೊಲೆ ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಜಾಮೀನು ರದ್ದು ಆದೇಶದಲ್ಲಿ ಕೆಲ ತಪ್ಪುಗಳಿವೆ. ಮತ್ತೊಮ್ಮೆ ಪರಿಶೀಲಿಸಿ ಜಾಮೀನು ನೀಡುವಂತೆ ಪವಿತ್ರಾ ಗೌಡ ಮನವಿ ಮಾಡಿದ್ದರು. ಆದರೆ ನ್ಯಾಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ʼನಾವು ಆದೇಶ ಮತ್ತು ದಾಖಲೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ. ನಮ್ಮ ಅಭಿಪ್ರಾಯದಲ್ಲಿ, ಪುನರ್ ಪರಿಶೀಲನೆಗೆ ಯಾವುದೇ ಪ್ರಕರಣವನ್ನು ಸಲ್ಲಿಸಲಾಗಿಲ್ಲ. ಈ ಹಿನ್ನೆಲೆ ಈ ಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆʼ ಎಂದು ಪೀಠ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News