ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಜಾಮೀನು ರದ್ದು ಬೆನ್ನಲ್ಲೇ ನಟ ದರ್ಶನ್‌ರನ್ನು ಬಂಧಿಸಿದ ಪೊಲೀಸರು
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ
ಬೆಂಗಳೂರಿನ ಹೊಸಕೆರೆಯಳ್ಳಿಯ ಅಪಾರ್ಟ್‌ಮೆಂಟ್ ಬಳಿ ದರ್ಶನ್ ರನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣದ ಎ1 ಆರೋಪಿ ಪ ಪವಿತ್ರಾ ಗೌಡಳನ್ನು ಆಕೆಯ ಆರ್. ಆರ್.ನಗರದ ನಿವಾಸದಿಂದ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಹಿತ ಎಲ್ಲಾ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರಕಾರ ಮೇಲ್ಮನವಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಜೆ.ಬಿ.ಪಾರ್ದಿವಾಲಾ ಹಾಗೂ ಆರ್ ಮಹಾದೇವನ್ ಅವರಿರುವ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.