×
Ad

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Update: 2024-10-05 17:40 IST

ದರ್ಶನ್(PC:X)

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮಂಗಳವಾರ(ಅ.8)ಕ್ಕೆ ಮುಂದೂಡಿದೆ.

ನಟ ದರ್ಶನ್ ಸಲ್ಲಿಸಿದ್ದ ಅರ್ಜಿ‌ಯನ್ನು ಸಿಟಿ‌ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿದರು.

ಈ ವೇಳೆ ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಸಿ, ಪೊಲೀಸರು ದರ್ಶನ್ ವಿರುದ್ಧ ಸುಳ್ಳು ಸಾಕ್ಷಿ ಸೃಷ್ಟಿ ಮಾಡಿದ್ದಾರೆ. ವಾಟ್ಸಾಪ್‌ನಲ್ಲಿ ಕೊಲೆ ಕುರಿತು ಮಾತನಾಡಿರುವ ಬಗ್ಗೆ ಮಾಹಿತಿ ಇಲ್ಲ. ಮಹಜರು ಸೇರಿದಂತೆ ತನಿಖೆಯಲ್ಲಿ ಲೋಪಗಳಿವೆ ಎಂದು ಆರೋಪಿಸಿದರು.

ಸಿ.ವಿ.ನಾಗೇಶ್ ವಾದ ಮುಕ್ತಾಯ ಆಗಿದ್ದು, ಸರಕಾರದ ಪರ ಎಸ್ಪಿಪಿ ಪ್ರತಿವಾದ ಮಂಡಿಸಲು ಕಾಲಾವಾಕಾಶಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ್ಯಾಯಾಲಯ ಮಂಗಳವಾರ ಮಧ್ಯಾಹ್ನ 12:30ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News