×
Ad

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್​ ಜಾಮೀನು ಅರ್ಜಿ : ನಾಳೆ ತೀರ್ಪು ಪ್ರಕಟ

Update: 2024-10-29 16:06 IST

ನಟ ದರ್ಶನ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ‌ಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ನಾಳೆ(ಅ.30)ಗೆ ತೀರ್ಪು ಕಾಯ್ದಿರಿಸಿದೆ.

ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ʼಅರ್ಜಿದಾರರ ದೇಹದಲ್ಲಿ ಸಮರ್ಪಕವಾಗಿ ರಕ್ತಪರಿಚಲನೆ ಆಗುತ್ತಿಲ್ಲ, ಪಾದಗಳಲ್ಲಿ ಮರಗಟ್ಟುವಿಕೆ ಸಮಸ್ಯೆ ಇದೆ. ಕಾಲಿನಲ್ಲಿ ನರದ ತೊಂದರೆ ಉಂಟಾಗಿದ್ದು, ಈಗಾಗಲೇ ಸ್ವಲ್ಪ ಮಟ್ಟಿಗೆ ಪಾದ ಸ್ಪರ್ಶ ಕಳೆದುಕೊಂಡಿದ್ದಾರೆ. ಹೀಗಿರುವಾಗ ಸೂಕ್ತ ಚಿಕಿತ್ಸೆ ‌ನೀಡುವಲ್ಲಿ ವಿಫಲವಾದರೆ, ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಡಬಹುದು. ವೈದ್ಯಕೀಯ ವರದಿಯೂ ಅವರು ಪಾರ್ಶ್ವವಾಯು ತುತ್ತಾಗುವ ಸಾಧ್ಯತೆ ಅಧಿಕವಾಗಿದೆ‌. ಹಾಗಾಗಿ‌ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು ಎಂದಿದ್ದಾರೆ. ಇವೆಲ್ಲವನ್ನೂ ಗಮನಿಸಿ ಮಧ್ಯಂತರ ಜಾಮೀ‌ನು‌ ನೀಡಬೇಕುʼ ಎಂದು ಮನವಿ ಮಾಡಿದರು.

ಈ ವೇಳೆ ಸರಕಾರದ ಪರ ವಕೀಲ ಪ್ರಸನ್ನ ಕುಮಾರ್ ವೈದ್ಯಕೀಯ ವರದಿಯಲ್ಲಿ ಪಾರ್ಶ್ವವಾಯು ತುತ್ತಾಗುತ್ತಾರೆ ಎಂದಿಲ್ಲ, ತುತ್ತಾಗಲೂಬಹುದು ಎಂದು ವೈದ್ಯರು ಅಂದಾಜಿಸಿದ್ದಾರಷ್ಟೇ ಎಂದರು. ಈ ವೇಳೆ ನ್ಯಾಯಪೀಠ, ಏನು‌ ನಿಮ್ಮ ಮಾತಿನ ಅರ್ಥ? ಅರ್ಜಿದಾರರು ಅನಾರೋಗ್ಯದ ಅಂತಿಮ‌ ಹಂತಕ್ಕೆ ತಲುಪುವವರೆಗೆ ಕಾಯಬೇಕು ಎನ್ನುವುದೇ ಎಂದು ಪ್ರಶ್ನಿಸಿತ್ತು.

ವಾದ-‌ಪತ್ರಿವಾದ ಆಲಿಸಿದ ನ್ಯಾಯಪೀಠ ಅರ್ಜಿಯ ತೀರ್ಪನ್ನು ನಾಳೆಗೆ(ಬುಧವಾರ) ಪ್ರಕಟಿಸುವುದಾಗಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News