×
Ad

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆ.14ರ ವರೆಗೆ ನಟ ದರ್ಶನ್‍ಗೆ ನ್ಯಾಯಾಂಗ ಬಂಧನ ವಿಸ್ತರಣೆ

Update: 2024-08-01 20:56 IST

PC :x/@dasadarshan

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಹಾಗೂ ಸಹಚರರಿಗೆ ಮತ್ತೆ ಆಗಸ್ಟ್ 14ರವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.

ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡ ಹಿನ್ನೆಲೆ, ನಟ ದರ್ಶನ್, ಪವಿತ್ರಾಗೌಡ ಸೇರಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 13 ಆರೋಪಿಗಳು ಹಾಗೂ ತುಮಕೂರು ಜೈಲಿನಲ್ಲಿರುವ 4 ಆರೋಪಿಗಳನ್ನು ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಗರದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಮೂರ್ತಿ ವಿಶ್ವನಾಥ ಸಿ.ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು.

ಪ್ರಕರಣ ಕುರಿತು ವಾದ ಮಂಡಿಸಿದ ಸರಕಾರದ ಪರ ವಕೀಲರು, ಕೊಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ. ಕೆಲ ಆರೋಪಿಗಳ ಗುರುತು ಕವಾಯತು ನಡೆಸಬೇಕಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಾಂತ್ರಿಕ ಹಾಗೂ ವೈಜ್ಞಾನಿಕ ವರದಿಗಳನ್ನು ಸಂಗ್ರಹಿಸಬೇಕು ಎಂಬುದು ಸೇರಿದಂತೆ 11 ಅಂಶಗಳನ್ನು ಉಲ್ಲೇಖಿಸಿ, ಈ ಹಂತದಲ್ಲಿ ಜಾಮೀನು ಮಂಜೂರು ಮಾಡಬಾರದು ಎಂದು ವಾದಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News