×
Ad

ರೇಣುಕಾಸ್ವಾಮಿ ಕೊಲೆ ಪ್ರಕರಣ | ಸೆ.9ರವರೆಗೆ ನಟ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ

Update: 2024-08-28 20:20 IST

PC :x/@dasadarshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಸಹಚರರ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಆ.28ರಂದು ನಟ ದರ್ಶನ್ ಸೇರಿ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡಿತ್ತು. ಹೀಗಾಗಿ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.

ನ್ಯಾಯಾಧೀಶರು ಆರಂಭದಲ್ಲಿ ಎಲ್ಲರ ಹಾಜರಾತಿ ಪಡೆದರು. ಆ ಬಳಿಕ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News