Republic Day 2026 | ಮಾಣಿಕ್ ಷಾ ಮೈದಾನದಲ್ಲಿ ಪರೇಡ್ ಆರಂಭ
Update: 2026-01-26 09:27 IST
ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ಭವ್ಯ ಪರೇಡ್‌ಗೆ ಅಧಿಕೃತವಾಗಿ ಚಾಲನೆ ದೊರೆಯಿತು.
ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಪರೇಡ್‌ನಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದರು.
ಪೊಲೀಸ್, ಗೃಹರಕ್ಷಕ ದಳ, ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಎನ್‌ಎಸ್ಎಸ್, ರೆಡ್ ಕ್ರಾಸ್ ಸೇರಿದಂತೆ 30ಕ್ಕೂ ಹೆಚ್ಚು ತಂಡಗಳು ಪರೇಡ್‌ನಲ್ಲಿ ಭಾಗವಹಿಸಿದ್ದವು.
ಒಟ್ಟು 1,326 ಮಂದಿ ಈ ಪರೇಡ್‌ನಲ್ಲಿ ಭಾಗವಹಿಸಿದ್ದು, ಶಿಸ್ತಿನ ಪ್ರದರ್ಶನ ನಡೆಯಿತು.