×
Ad

ಪಿಎಸ್ಸೈ ನೇಮಕಾತಿ ಪರೀಕ್ಷೆ ಮುಂದೂಡಿಕೆಗೆ ಪರಿಶೀಲನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Update: 2024-08-30 12:55 IST

ಬೆಂಗಳೂರು ಆ.30: ಪಿಎಸ್ಸೈ ನೇಮಕಾತಿ ಪರೀಕ್ಷೆ ನಿಗದಿಯಾಗಿದ್ದ ದಿನವೇ (ಸೆ.22) ಯುಪಿಎಸ್‌ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸದಾಶಿವ ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎಸ್ ಸಿಗಿಂತ ಮೊದಲೇ ನಾವು ಪಿಎಸ್ಸೈ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದೇವೆ. ಮುಂದೂಡುವ ಬಗ್ಗೆ ಸಾಧ್ಯತೆ ಇದ್ದರೆ, ಹೆಚ್ಚಿನ ಮನವಿಗಳು ಬಂದಿದ್ದರೆ ಪರಿಗಣಿಸಬಹುದು. ಈ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಪಿಎಸ್ಸೈ ನೇಮಕಾತಿ ಬಹಳ ವಿಳಂಬವಾಗಿದೆ. ಈ ಹಿಂದೆ ಗೃಹ ಸಚಿವನಾಗಿದ್ದಾಗ ಯಾವುದೇ ಅಡೆತಡೆಗಳಿಲ್ಲದೇ ಸಾವಿರಾರು ಹುದ್ದೆಗಳ ನೇಮಕಾತಿ ಸುಲಭವಾಗಿ ನಡೆದಿದೆ. ಪಿಎಸ್ಸೈ ಹಗರಣದ ಬಳಿಕ ವಿಳಂಬವಾಗುತ್ತಿದೆ. ಫಲಿತಾಂಶ ಪ್ರಕಟಿಸಲು ಸಹ ಕೋರ್ಟ್ ಗೆ ಹೋಗುತ್ತಿದ್ದಾರೆ. ಆದರೂ ಫಲಿತಾಂಶ ಪ್ರಕಟಿಸಲು ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News