×
Ad

ರೌಡಿಶೀಟರ್ ಸಹದೇವ ಕೊಲೆ ಪ್ರಕರಣ: ಅಣ್ಣ- ತಮ್ಮ ಸೇರಿ ಎಂಟು ಮಂದಿ ಆರೋಪಿಗಳು ಸೆರೆ

Update: 2023-11-12 09:48 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ನ. 12: ಬೇಕರಿ ಬಳಿ ಟೀ ಕುಡಿಯಲು ತೆರಳಿದ್ದ ರೌಡಿಶೀಟರ್ ಸಹದೇವನ ಹತ್ಯೆ ಪ್ರಕರಣ ಸಂಬಂಧ ಎಂಟು ಮಂದಿ ಆರೋಪಿಗಳನ್ನು ಇಲ್ಲಿನ ಪುಟ್ಟೇನಹಳ್ಳಿ ಠಾಣಾ ಪೊಲೀಸರು ಬಂಧಿಸಿರುವುದು ವರದಿಯಾಗಿದೆ.

ಸಹೋದರಾರರಾದ ವಿನಯ್, ಅಕ್ಷಯ್ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಣೇಶ ಬಿಡುವ ವಿಚಾರಕ್ಕೆ ರೌಡಿಶೀಟರ್ ಸಹದೇವ್, ರಾಬರಿ ನವೀನ್ ಮತ್ತು ವಿನಯ್ ಎಂಬುವರ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಹಳೇ ದ್ವೇಷಕ್ಕೆ ನ.8ರಂದು ನಗರದ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ಸಹದೇವನನ್ನು ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಆರೋಪಿಗಳ ಗುಂಪು ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News