RSS ನೋಂದಣಿಯಾಗಿಲ್ಲ, ಮುಂದೆಯೂ ಮಾಡುವುದಿಲ್ಲ : ಬಿ.ಎಲ್.ಸಂತೋಷ್

Update: 2026-08-15 19:28 IST

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್) ಇದುವರೆಗೆ ನೋಂದಣಿಯಾಗಿಲ್ಲ ಮತ್ತು ಮುಂದೆಯೂ ನೋಂದಣಿ ಮಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಹೇಳಿದ್ದಾರೆ.

ಶುಕ್ರವಾರ ತಡರಾತ್ರಿ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಬನ್ನಪ್ಪ ಪಾರ್ಕ್‍ನಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ನೋಂದಣಿ ಮಾಡಿಕೊಂಡಿರುವ ಸಂಘಟನೆಗಳು ಏನು ಕೆಲಸ ಮಾಡುತ್ತಿವೆ ಎಂಬುದೂ ಜನರಿಗೆ ಗೊತ್ತಿದೆ ಎಂದು ಟೀಕಿಸಿದರು.

ಆರೆಸ್ಸೆಸ್ ಸಂಘಟನೆಯು ಯಾವುದೇ ನೋಂದಣಿ ಹೊಂದಿಲ್ಲ. ಭವಿಷ್ಯದಲ್ಲೂ ಆರೆಸ್ಸೆಸ್ ನೋಂದಣಿ ಮಾಡುವುದಿಲ್ಲ. ಸಂಘದ ನೋಂದಣಿಯು ಯಾವುದೇ ವಿಷಯಕ್ಕೆ ಮಾನದಂಡವಲ್ಲ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಎಲ್ಲದಕ್ಕೂ ಮಾನದಂಡ ರಚನೆ ಮಾಡುವವರಲ್ಲ ಎಂದು ಬಿ.ಎಲ್. ಸಂತೋಷ್ ಹೇಳಿದರು.

ನಮಗೆ ಉಪ್ಪು ತಯಾರಿಕೆ ಮತ್ತು ಚರಕದಿಂದ ಮಾತ್ರವೇ ಸ್ವಾತಂತ್ರ್ಯ ಬಂದಿದೆ ಎಂದು ತಪ್ಪಾಗಿ ಹೇಳಿಕೊಡಲಾಗುತ್ತಿದೆ. ಆದರೆ, 35 ಲಕ್ಷಕ್ಕೂ ಅಧಿಕ ಮಂದಿಯ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. 1200 ವರ್ಷಗಳ ಸುದೀರ್ಘ ಕಾಲ ಖಿಲ್ಜಿ, ಅರಬ್ಬರು, ಯುರೋಪಿಯನ್ನರು ಹಾಗೂ ಬ್ರಿಟಿಷರ ದಾಳಿಯಿಂದ ನಮ್ಮನ್ನು ರಕ್ಷಿಸಲಾಗಿದೆ ಎಂದು ಅವರು ಸ್ಮರಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News