×
Ad

RTE ಅಡಿ ಪ್ರವೇಶ ಪಡೆದ ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗೆ ಅದೇ ಶಾಲೆಯಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ

Update: 2026-05-21 21:22 IST

ಸಾಂದರ್ಭಿಕ ಚಿತ್ರ (AI)

ಬೆಂಗಳೂರು: RTE ಅಡಿ ಪ್ರವೇಶ ಪಡೆದು 2025-26ನೇ ಸಾಲಿನಲ್ಲಿ 8ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳನ್ನು ಅದೇ ಶಾಲೆಗಳಲ್ಲಿಯೇ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಿ, ರಾಜ್ಯ ಸರಕಾರವು ಗುರುವಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಆಯವ್ಯಯದಂತೆ ಕ್ರಮ ವಹಿಸಲಾಗಿದ್ದು, RTE ಅಡಿ ದಾಖಲಾದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳು ಅದೇ ಶಾಲೆಗಳಲ್ಲಿಯೇ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಒಂದು ವೇಳೆ RTE ಅಡಿ ಪ್ರವೇಶ ಪಡೆದು 2025-26 ನೇ ಸಾಲಿನಲ್ಲಿ 08ನೇ ತರಗತಿಯಲ್ಲಿ ವ್ಯಾಸಂಗ ಮಾಡಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳು ಅದೇ ಶಾಲೆಯಲ್ಲಿ ಈಗಾಗಲೇ 9ನೇ ತರಗತಿ ದಾಖಲಾತಿಗೆ ಶುಲ್ಕ ಭರಿಸಿದ್ದರೆ, ಅದನ್ನು ಹಿಂದಿರುಗಿಸಬೇಕು.

ಅಲ್ಲದೇ ಪ್ರಸ್ತುತ ಶಾಲೆಯಲ್ಲಿ 9 ಮತ್ತು 10ನೇ ತರಗತಿಗಳು ಇದ್ದಾಗ್ಯೂ ಕಾರಣಾಂತರಗಳಿಂದ ಆರ್.ಟಿ.ಇ ಅಡಿ ಪ್ರವೇಶ ಪಡೆದ ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ವಿತರಿಸಲಾಗಿರುತ್ತದೆ. ಅಂತ ವಿದ್ಯಾರ್ಥಿಗಳು ಒಂದು ವೇಳೆ ಅದೇ ಶಾಲೆಯಲ್ಲಿ ವ್ಯಾಸಂಗ ಮುಂದುವರೆಸಲು ಬಯಸಿದರೆ 9 ಮತ್ತು 10ನೇ ತರಗತಿಯನ್ನು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಬೇಕು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News