ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಆರ್.ವಿ.ದೇಶಪಾಂಡೆ ನೇಮಕ
Update: 2026-08-12 20:39 IST
ಬೆಂಗಳೂರು : ಉತ್ತಡ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ, ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಬುಧವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.